February 20, 2026

ಕಾಸರಗೋಡು: ಅನಂತಪದ್ಮನಾಭಸ್ವಾಮಿ ಕ್ಷೇತ್ರದ ಕೆರೆಯಲ್ಲಿ ಮೊಸಳೆ ಪತ್ತೆ

0
IMG-20231111-WA0023.jpg

ಕಾಸರಗೋಡು: ಕಾಸರಗೋಡು ಜಿಲ್ಲೆಯ ಅನಂತಪುರದ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಬಬಿಯಾ ಮೊಸಳೆ ಸಾವನ್ನಪ್ಪಿದ ಒಂದು ವರ್ಷ ಒಂದು ತಿಂಗಳ ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷಗೊಂಡಿದೆ.

ದೇವಸ್ಥಾನದ ಕಲ್ಯಾಣಿಯಲ್ಲಿ ದೇವಮೊಸಳೆ ಅಂತಾನೆ ಇತಿಹಾಸ ಹೊಂದಿದ್ದ ಬಬಿಯಾ ಎನ್ನುವ ಮೊಸಳೆ 75 ವರ್ಷಗಳ ಕಾಲ ಪೂಜಿಸಲ್ಪಟ್ಟಿದ್ದು, 2022 ರ ಅಕ್ಟೋಬರ್ 9 ರಂದು ಮೃತಪಟ್ಟಿತ್ತು. ಇದೀಗ ಒಂದು ವರ್ಷ ಒಂದು ತಿಂಗಳ ಬಳಿಕ ಸದೃಢ ಮೊಸಳೆಯೊಂದು ಪ್ರತ್ಯಕ್ಷವಾಗಿರುವುದು ಭಕ್ತರಲ್ಲಿ ಭಾರೀ ಅಚ್ಚರಿಗೆ ಕಾರಣವಾಗಿದೆ.

ಅನಂತಪದ್ಮನಾಭ ದೇವಸ್ಥಾನದಲ್ಲಿ ಮೊಸಳೆ ದೇವರ ಮೊಸಳೆಯಾಗಿದ್ದು, ಬಬಿಯಾ ಹೆಚ್ಚಿನ ಸಮಯವನ್ನು ದೇವಸ್ಥಾನದ ಎಡ ಭಾಗದಲ್ಲಿರುವ ಗುಹೆಯಲ್ಲಿ ನೆಲೆಸುತ್ತಿತ್ತು. ಮಧ್ಯಾಹ್ನದ ಪೂಜೆಯ ನಂತರ ನೈವೇದ್ಯ ಇಟ್ಟು ಮೊಸಳೆಯನ್ನು ಕರೆಯಲಾಗುತ್ತಿತ್ತು. ಹೀಗೆ 75 ವರ್ಷಗಳ ಕಾಲ ಪೂಜಿಸಲ್ಪಟ್ಟಿದ್ದ ಬಬಿಯಾ ಮೊಸಳೆ ಕಳೆದ ವರ್ಷ ಮೃತಪಟ್ಟಿತ್ತು.

Leave a Reply

Your email address will not be published. Required fields are marked *

error: Content is protected !!