February 20, 2026

ಉಡುಪಿ: ಮೂವರು ಮಕ್ಕಳ ಸಹಿತ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

0
image_editor_output_image1123073800-1699768540878.jpg

ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ಎಂಬಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಕೊಲೆಯಾದವರನ್ನು ಹಸೀನಾ ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್ (21), ಅಸೀಮ್(14) ಎಂದು ಗುರುತಿಸಲಾಗಿದೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಅನುಮಾಸ್ಪದ ವ್ಯಕ್ತಿ ಬೋಳು ತಲೆಯವನಾಗಿದ್ದ ಎಂದು ತಿಳಿದು ಬಂದಿದೆ.

ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಈ ಕೃತ್ಯ ಎಸಗಿರುವ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

error: Content is protected !!