ಕಿನ್ನಿಗೋಳಿ: ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆಗೆ ಢಿಕ್ಕಿಯಾದ ಕಾರು
ಕಿನ್ನಿಗೋಳಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆಯ ತಡೆ ಬೇಲಿಗೆ ಡಿಕ್ಕಿ ಹೊಡೆದ ಘಟನೆ ಕಿನ್ನಿಗೋಳಿ ಸಮೀಪದ ಉಲ್ಲಂಜೆಯಲ್ಲಿ ನಡೆದಿದೆ.
ಕಾರಿನಲ್ಲಿದ್ದವರು ಅಲ್ಪ ಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಬಜಪೆ ಕಡೆಯಿಂದ ಕಿನ್ನಿಗೋಳಿ ಕಡೆಗೆ ಸಂಚರಿಸುತ್ತಿದ್ದ ಕಾರು ಉಲ್ಲಂಜೆ ಸಮೀಪ ಚಾಲಕನ ನಿಯಂತ್ರಣ ತಪ್ಪಿದೆ.
ಈ ಸಂದರ್ಭ ಕಾರು ಎಡಕ್ಕೆ ಚಲಿಸಿ ಮುಂಭಾಗದಲ್ಲಿದ್ದ ಕಿರುಸೇತುವೆಯ ತಡೆ ಬೇಲಿಗೆ ಡಿಕ್ಕಿ ಹೊಡೆದಿದ್ದು, ರಸ್ತೆಯ ಮದ್ಯ ಭಾಗಕ್ಕೆ ಚಲಿಸಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗದ ಏಡ ಬದಿಯ ಟಯರ್ ಒಡೇದು ಹೋಗಿದ್ದು ಕಾರು ಜಖಂಗೊಂಡಿದೆ. ಅಲ್ಲದೆ ತಡೆ ಬೇಲಿ ಕುಸಿದು ಬಿದ್ದಿದೆ, ಹತ್ತಿರದಲ್ಲೇ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಹಾನಿಯಾಗಿದೆ. ಬಜಪೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ





