ಮಂಗಳೂರು: ಮಾದಕ ವಸ್ತು ಸೇವಿಸಿ ತೂರಾಡುತ್ತಿದ್ದ ಯುವಕನ ಬಂಧನ
ಮಂಗಳೂರು: ಮಾದಕ ವಸ್ತು ಸೇವಿಸಿ ತೂರಾಡುತ್ತಿದ್ದ ಆರೋಪಿ ಯುವಕನೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಸುರತ್ಕಲ್ಪುರ ಕೋರ್ದಬ್ಬು ದೈವಸ್ಥಾನದ ಬಳಿಯ ನಿವಾಸಿ ತಿಲಕ್ ರಾಜ್ (28) ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.
ಈತ ನಗರದ ಉರ್ವ ಮಾರ್ಕೆಟ್ ಬಳಿ ಮಾದಕ ವಸ್ತು ಸೇವಿಸಿ ತೂರಾಡುತ್ತಿದ್ದ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಯುವಕನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ.ಆರೋಪಿ ವಿರುದ್ಧ ನಗರದ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





