ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಶನಲ್, ಚಾರಿಟೇಬಲ್ ಟ್ರಸ್ಟ್ , ಜನಸೇವಾ ಕೇಂದ್ರದ ವತಿಯಿಂದ ವಸ್ತ್ರದಾನ- ಸಹಭೋಜನ ಸಮಾರಂಭ
ವಿಟ್ಲ: ರೈ ಎಸ್ಟೇಟ್ ಎಜ್ಯುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ , ಜನಸೇವಾ ಕೇಂದ್ರ ಪುತ್ತೂರು ವತಿಯಿಂದ ಆಯೋಜಿಸಲಾದ ವಸ್ತ್ರದಾನ ಮತ್ತು ಸಹಭೋಜನ ಸಮಾರಂಭ ಪುತ್ತೂರು ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ ಸೋಮವಾರ ನಡೆಯಿತು.
ಸಮಾರಂಭದಲ್ಲಿ ಆಶೀರ್ವಚನ ನೀಡಿದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮಿಗಳು ದಾನ ಮಾಡುವುದರಿಂದ ಗಳಿಸಿದ ಸಂಪತ್ತಿಗೆ ನಿಜವಾದ ಅರ್ಥ ಬರುತ್ತದೆ. ಪ್ರೀತಿ ಇದ್ದಾಗ ಮಾತ್ರ ಜನರ ಹೃದಯ ಗೆಲ್ಲಲು ಸಾಧ್ಯವಾಗುತ್ತದೆ. ಮಾನವೀಯತೆ ಎಲ್ಲಿರುತ್ತದೆಯೋ ಅಲ್ಲಿ ಬದುಕು ಚೆನ್ನಾಗಿರುತ್ತದೆ. ಅಶೋಕ್ ರೈ ಗಳು ಭ್ರಷ್ಟಾಚಾರ ರಹಿತ ಆಡಳಿತವನ್ನು ಪುತ್ತೂರಿನಲ್ಲಿ ಜನರಿಗೆ ನೀಡಬೇಕು. ರಾಜಕೀಯದಲ್ಲಿ ಧರ್ಮಬೇಕು, ಆದರೆ ಧರ್ಮದಲ್ಲಿ ರಾಜಕೀಯ ಬೇಡ. ಅಶೋಕ್ ರೈ ನಡೆಸುತ್ತಿರುವ ಟ್ರಸ್ಟ್ ಸಮಾಜಮುಖಿಯಾಗಿದೆ. ಅವರು ಬಡವರ ಕಷ್ಟವನ್ನು ಅರಿತು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ವಿಧಾನಸಭಾ ಸಭಾಪತಿ ಯು.ಟಿ.ಖಾದರ್ ಮಾತನಾಡಿ ಅಶೋಕ್ ರೈಯವರಂತಹ ವಿಶಾಲ ಮನಸ್ಸು ನಮ್ಮೆಲ್ಲರದು ಆಗಬೇಕು. ಪುತ್ತೂರು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಅಭಿವೃದ್ಧಿಯೊಂದಿಗೆ ಸಾಮರಸ್ಯತೆಗೆ ಶಾಸಕರ ಪ್ರಯತ್ನ, ಕ್ರಿಯಾಶೀಲತೆ ಕಾರಣವಾಗಿದೆ. ತುಳುಭಾಷೆ ಸ್ಥಾನಮಾನಕ್ಕೆ ನಮ್ಮೆಲ್ಲರ ಪ್ರಯತ್ನ ಮುಂದುವರಿಯುತ್ತದೆ ಎಂದರು.
ಟ್ರಸ್ಟ್ ಸಂಸ್ಥಾಪಕ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಭ್ರಷ್ಟಾಚಾರ ರಹಿತವಾಗಿ ಗಳಿಸಿದ ಸಂಪತ್ತನ್ನು ಬಡವರಿಗೆ ದಾನ ರೂಪದಲ್ಲಿ ನೀಡುತ್ತಿದ್ದೇನೆ. ಮುಂದಿನ ವರ್ಷ 1 ಲಕ್ಷ ಮಂದಿಗೆ ವಸ್ತ್ರ ವಿತರಣೆ ಮಾಡುವ ಯೋಜನೆಯಿದೆ ಎಂದರು.
ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ, ಪುತ್ತೂರು ಮಾಜಿ ಶಾಸಕಿ ಟಿ.ಶಕುಂತಳಾ ಶೆಟ್ಟಿ, ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆ ಸಂಚಾಲಕ ಲಾರೆನ್ಸ್ ಮಸ್ಕರೇನಸ್, ಹುಸೇನ್ ದಾರಿಮಿ ರೆಂಜಲಾಡಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ.ಎಸ್.ಮಹಮ್ಮದ್, ನಗರ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ ರೈ ಎಂ.ಬಿ ಮಾತನಾಡಿದರು.
ಪುತ್ತೂರು ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ, ಪುತ್ತೂರು ಶ್ರೀ ರಾಮಕೃಷ್ಣ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ನಗರ ಸಭೆಯ ಹೆಚ್.ಮಹಮ್ಮದಾಲಿ, ಟ್ರಸ್ಟ್ ಪ್ರವರ್ತಕಿ ಸುಮಾ ಅಶೋಕ್ ರೈ, ವಿಟ್ಲ -ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ, ಬಂಟ್ವಾಳ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಡಾ. ರಘು ಬೆಳ್ಳಿಪ್ಪಾಡಿ, ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಸುಬ್ರಹ್ಮಣ್ಯ ರೈ, ರಾಜ್ ಕುಮಾರ್ ರೈ, ಟ್ರಸ್ಟ್ ಮಾಧ್ಯಮ ಸಮಿತಿ ಮುಖ್ಯಸ್ಥ ಕೃಷ್ಣ ಪ್ರಸಾದ್ ಭಟ್ ಇನ್ನಿತರ ಕ್ಷೇತ್ರಗಳ ಗಣ್ಯರು ಭಾಗವಹಿಸಿದ್ದರು.
ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ ಸ್ವಾಗತಿಸಿದರು. ನಿಹಾಲ್ ಶೆಟ್ಟಿ ವಂದಿಸಿದರು. ಮಹಮ್ಮದ್ ಬಡಗನ್ನೂರು ಕಾರ್ಯಕ್ರಮ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ಹಿರಿಯ ಸಾಮಾಜಿಕ ಕಾರ್ಯಕರ್ತ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ತಿಲು ಹಾಗೂ ಸಮಾಜದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ಪುತ್ತೂರು ವಿಧಾನಸಭಾ ವ್ಯಾಪ್ತಿಯ 20 ಮಂದಿ ಸಾಧಕರನ್ನು ಸನ್ಮಾನಿಸಲಾಯಿತು. ವಿಶೇಷ ಆಕರ್ಷಣೆಯಾಗಿ ಗೂಡುದೀಪ ಸ್ಪರ್ಧೆ ನಡೆಯಿತು. ಪುರುಷ, ಮಹಿಳೆ, ಮಕ್ಕಳಿಗೆ, ಹಾಗೂ ವಿಶೇಷ ಚೇತನರಿಗೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗಿತ್ತು.
ದೀಪಾವಳಿಯ ಪೂಜಾ ವಿಧಿವಿಧಾನ ನೆರವೇರಿತು. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಶೋಕ್ ಕುಮಾರ್ ರೈರವರ ತಾಯಿ ಗಿರಿಜಾ ಎಸ್. ರೈ ದೀಪ ಬೆಳಗಿಸಿ ಚಾಲನೆ ನೀಡಿದರು.





