February 19, 2026

ಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ:
ಕೊಲೆಗೆ ಕೌಟುಂಬಿಕ ಕಲಹ ಕಾರಣ ಅಲ್ಲ: ಯಜಮಾನ ನೂರ್ ಮುಹಮ್ಮದ್ ಹೇಳಿಕೆ

0
image_editor_output_image980847397-1699954793503

ಉಡುಪಿ: ನನ್ನ ಪತ್ನಿ ಮಕ್ಕಳ ಕೊಲೆ ಪ್ರಕರಣದಲ್ಲಿ ಪೊಲೀಸರು ಕ್ಷಿಪ್ರಗತಿಯಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವ ಮೂಲಕ ನಮಗೆ ನ್ಯಾಯ ಒದಗಿಸಬೇಕು ಎಂದು ಮನೆಯ ಯಜಮಾನ ನೂರ್ ಮುಹಮ್ಮದ್ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು
ಪೊಲೀಸ್ ತನಿಖೆಗೆ ನಾನು ದಿನ 24ಗಂಟೆಗಳ ಕಾಲವೂ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧನಿದ್ದೇನೆ ಪ್ರಕರಣದ ತನಿಖಾಧಿಕಾರಿಗಳಿಗೆ ನನ್ನ ಬಳಿ ಇರುವ ಎಲ್ಲ ರೀತಿಯ ಮಾಹಿತಿಗಳನ್ನು ನೀಡಿದ್ದೇನೆ. ನನ್ನ ಮತ್ತು ಮಕ್ಕಳ ನಾಲ್ಕು ಮೊಬೈಲ್‌ಗಳನ್ನು ಅವರಿಗೆ ಒಪ್ಪಿಸಿದ್ದೇನೆ ಎಂದರು.

ಕೊಲೆಗೆ ಕೌಟುಂಬಿಕ ಕಲಹ ಕಾರಣ ಎಂದು ಮಾಧ್ಯಮಗಳಲ್ಲಿ ಸುದ್ದಿ ಬಂದಿದ್ದು, ಅದನ್ನು ಕೇಳಿ ನನಗೆ ಆಘಾತ ಆಗಿದೆ. ಅದರಲ್ಲಿ ಯಾವುದೇ ರೀತಿಯ ಸತ್ಯಾಂಶ ಇಲ್ಲ ಎಂದು ನೂರ್ ಮುಹಮ್ಮದ್ ಹೇಳಿದರು.

ನಾನು ಮದುವೆಯಾಗಿ 30 ವರ್ಷಗಳಾಗಿವೆ. 15 ವರ್ಷಗಳ ಕಾಲ ನನ್ನ ಪತ್ನಿ ಮತ್ತು ಮಕ್ಕಳು ನನ್ನ ಜೊತೆ ರಿಯಾದ್‌ನಲ್ಲಿಯೇ ಇದ್ದರು. ಕಳೆದ ರಂಝಾನ್ ಹಬ್ಬದ ಸಂದರ್ಭ ನಾವೆಲ್ಲ ಮಕ್ಕಾ ಮದೀನದಲ್ಲಿ ಉಮ್ರಾ ಮಾಡಿ ಹಬ್ಬ ಆಚರಿಸಿ ಊರಿಗೆ ಬಂದಿದ್ದೇವೆ. ಮತ್ತೆ 15ದಿನಗಳಲ್ಲಿ ಅವರು ವಾಪಾಸ್ಸು ಸೌದಿಗೆ ಬರಲು ಸಿದ್ಧರಾಗಿದ್ದರು. ಈ ದುರ್ಘಟನೆ ನಡೆದಿರುವುದರಿಂದ ನಾನು ತುರ್ತಾಗಿ ಬರುವಂತಾಯಿತು ಎಂದು ಅವರು ತಿಳಿಸಿದರು.

ನನ್ನ ಮಗಳು ಐನಾಝ್ ಏರ್ ಇಂಡಿಯಾದಲ್ಲಿ ಗಗನಸಖಿಯಾಗಿದ್ದು, ಬೆಳಗ್ಗೆ 11 ಗಂಟೆಗೆ ಅವಳಿಗೆ ದುಬೈ ಹೋಗಲು ಇತ್ತು. ಸೌದಿಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ನನ್ನ ದೊಡ್ಡ ಮಗಳು ಮಂಗಳೂರಿನಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿದ್ದಳು. ಒಂದು ವರ್ಷದ ಶಿಕ್ಷಣ ಮುಗಿದ ಮಾಡಿದ ಬಳಿಕ ಮತ್ತೆ ಸೌದಿಗೆ ಹೋಗುವ ಯೋಜನೆ ಅವಳಿಗೆ ಇತ್ತು ಮುಂದಿನ ವರ್ಷ ಮನೆಗೆ ಪೈಂಟ್ ಮಾಡಿ ದೊಡ್ಡ ಮಗ ಮತ್ತು ಮಗಳಿಗೆ ಮದುವೆ ಮಾಡುವ ಯೋಜನೆ ಕೂಡ ಇತ್ತು ಎಂದು ಅವರು ತಿಳಿಸಿದರು.

ಇಲ್ಲಿನ ಸುತ್ತಮುತ್ತಲಿನ ಜನ ಭಯ ಭೀತರಾಗಿದ್ದಾರೆ.
ಮಗನನ್ನು ಹೊರಗಡೆ ಕಳುಹಿಸಲು ಹೆದರಿಕೆಯಾಗುತ್ತಿದೆ. ನಮ್ಮ ಹಿಂದೆ, ನಮ್ಮ ಸುತ್ತಮುತ್ತ ಯಾರಿದ್ದಾರೆ ನಮಗೆ ಗೊತ್ತಿಲ್ಲ ಎಂದು ನೂರ್ ಮಹಮ್ಮದ್ ಆತಂಕ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

error: Content is protected !!