ಉಡುಪಿ: ನಾಲ್ವರ ಹತ್ಯೆ ಪ್ರಕರಣ:
ಮನೆ ಯಜಮಾನ ನೂರ್ ಮಹಮ್ಮದ್ ಗೆ ಕರೆ ಮಾಡಿ ಧೈರ್ಯ ತುಂಬಿದ ಗೃಹ ಸಚಿವರು
ಉಡುಪಿ: ಸಂತೆಕಟ್ಟೆ ನೇಜಾರು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಯೋರ್ವ ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬದ ಯಜಮಾನ ನೂರ್ ಮಹಮ್ಮದ್ ರೊಂದಿಗೆ ಗೃಹ ಸಚಿವ ಪರಮೇಶ್ವರ್ ಎರಡು ದಿನಗಳ ಒಳಗೆ ಆರೋಪಿಯನ್ನು ಬಂಧಿಸುವ ಭರವಸೆ ನೀಡಿದ್ದಾರೆ.
ಈ ಕೃತ್ಯದಿಂದ ನಮ್ಮ ಸುತ್ತಮುತ್ತಲಿನ ಊರಿನ ಜನರಲ್ಲಿ ಭಯದ ವಾತಾವರಣ ಸೃಷ್ಠಿಯಾಗಿದೆ. ಆದುದರಿಂದ ಆದಷ್ಟು ಬೇಗ ನಮಗೆ ನ್ಯಾಯ ಒದಗಿಸಬೇಕು ಎಂದು ಅವರು ಹೇಳಿದರು.
ಈ ಸಂಬಂಧ ಕೂಡಲೇ ಕ್ರಮ ತೆಗೆದುಕೊಳ್ಳುತ್ತೇವೆ. ಇವತ್ತು ಇಲ್ಲ ನಾಳೆ ಒಳಗೆ ನಾವು ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಭರವಸೆ ನೀಡಿದರು.





