February 19, 2026

ಓದಿಕೋ ಎಂದು ತಾಯಿ ಬುದ್ಧಿ ಹೇಳಿದಕ್ಕೆ ಮನನೊಂದು ಪುತ್ರ ಆತ್ಮಹತ್ಯೆ

0
image_editor_output_image1548375823-1699962925635.jpg

ಬೆಳಗಾವಿ: ಓದಿಕೋ ಎಂದು ತಾಯಿ ಬುದ್ಧಿ ಹೇಳಿದಕ್ಕೆ ಮನನೊಂದು ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ದೇಶಪಾಂಡೆ ಫ್ಲ್ಯಾಟ್‌ನಲ್ಲಿ ನಡೆದಿದೆ.

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕ ಸಮರ್ಥ ಸುರೇಶ ಭಜಂತ್ರಿ(14) ಎಂದು ಗುರುತಿಸಲಾಗಿದೆ.

ಸಮರ್ಥ ಮೂಡಲಗಿ ಪಟ್ಟಣದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ. ದೀಪಾವಳಿ ರಜೆ ಇದೆ ತಿರುಗಬೇಡ, ಓದಿಕೋ ಎಂದು ತಾಯಿ ಬುದ್ಧಿ ಹೇಳಿದ್ದರು. ತಾಯಿಯ ಈ ಮಾತಿಗೆ ಮನನೊಂದು ತಮ್ಮಮನೆಯ ಬೆಡ್‌ರೂಂನಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆಯ ಬಗ್ಗೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!