December 18, 2025

ಉಡುಪಿ: ಬಿಜೆಪಿ ಹಿರಿಯ ಕಾರ್ಯಕರ್ತ ಕರಾಮತ್ ಆಲಿ ನಿಧನ

0
IMG-20231114-WA0009.jpg



ಉಡುಪಿ: ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಗೃಹ ಸಚಿವ ಡಾ! ವಿ.ಎಸ್. ಆಚಾರ್ಯರವರ ನಿಕಟವರ್ತಿ, ಕುಂಜಿಬೆಟ್ಟು ಕಟ್ಟೆ ಆಚಾರ್ಯ ಮಾರ್ಗ ನಿವಾಸಿ ಕರಾಮತ್ ಆಲಿ ನಿಧನರಾಗಿದ್ದಾರೆ. ಕರಾಮತ್ ಅಲಿ ನಿಧನರಾಗಿದ್ದು, ಅವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪಕ್ಷದ ಅಲ್ಪಸಂಖ್ಯಾತ ಮೋರ್ಚಾದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಅಲ್ಪಸಂಖ್ಯಾತ ಸಮುದಾಯವನ್ನು ಬಿಜೆಪಿ ಜೊತೆ ಜೋಡಿಸುವ ಜೊತೆಗೆ ಸರಕಾರದ ವಿವಿಧ ಸೌಲಭ್ಯಗಳನ್ನು ಸಮುದಾಯಕ್ಕೆ ತಲುಪಿಸುವ ಮೂಲಕ ಪಕ್ಷ ಸಂಘಟನೆಗೆ ವಿಶೇಷ ಒತ್ತು ನೀಡಿರುವ ಕರಾಮತ್ ಆಲಿ ಯವರ ನಿಧನದಿಂದ ಪಕ್ಷ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮುಖಂಡರೊಬ್ಬರನ್ನು ಕಳೆದುಕೊಂಡಿದೆ. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ನೀಡಲಿ ಹಾಗೂ ಕುಟುಂಬಕ್ಕೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರಾಮತ್ ಆಲಿಯವರ ನಿವಾಸಕ್ಕೆ ಪಕ್ಷದ ಪದಾಧಿಕಾರಿಗಳೊಂದಿಗೆ ಬೇಟಿ ನೀಡಿದ ಕುಯಿಲಾಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಪ್ರಮುಖರಾದ ರವಿ ಅಮೀನ್, ಪೂರ್ಣಿಮಾ ಸುರೇಶ್ ನಾಯಕ್, ವೀಣಾ ಎಸ್. ಶೆಟ್ಟಿ, ದಾವೂದ್ ಅಬೂಬಕ್ಕರ್, ಗಿರೀಶ್ ಎಮ್. ಅಂಚನ್, ದಿನಕರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!