ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: ನಾಲ್ವರು ಪ್ರಯಾಣಿಕರು ಗಂಭೀರ
ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಬ್ಯಾಡಗಿಯ ಮೊಟೇಬೆನ್ನೂರಿನ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಘಟನೆಯಲ್ಲಿ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಹೊರಟಿತ್ತು. ಈ ವೇಳೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತ ಸಂಭವಿಸಿದ ಕೂಡಲೇ ಹೈವೇ ಸಿಬ್ಬಂದಿ ಅಂಬುಲೆನ್ಸ್ ಕರೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ





