February 19, 2026

ಶಿವಮೊಗ್ಗ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರವಾಗಿ ಕೊಲೆ

0
image_editor_output_image-622954233-1700030745520.jpg

ಶಿವಮೊಗ್ಗ: ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಶಿವಮೊಗ್ಗ ನಗರದ ಗುಡ್ಡೆಕಲ್ ಫ್ಲೈಓವರ್ ಬಳಿ ನಡೆದಿದೆ.

ಮಲ್ಲೇಶ್ (35) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಹತ್ಯೆ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಶಿವಮೊಗ್ಗದ ಕೋಟೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಕೂಡ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಮಲ್ಲೇಶ್ ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

Leave a Reply

Your email address will not be published. Required fields are marked *

error: Content is protected !!