ಉಡುಪಿ: ನೇಜಾರು ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗಲೆ CRPFನಲ್ಲಿ ಇರಲಿಲ್ಲ: ಎಸ್ಪಿ ಅರಣ್
ಉಡುಪಿ: ನೇಜಾರು ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ವಶಕ್ಕೆ ಪಡೆದ ಶಂಕಿತ ಆರೋಪಿ ಪ್ರವೀಣ್ ಅರುಣ್ ಚೌಗಲೆ(39)ಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.
ಉಡುಪಿ ಎಸ್ಪಿ ಕಚೇರಿಯಲ್ಲಿಂದು ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು,ನಮ್ಮ ಮಾಹಿತಿ ಪ್ರಕಾರ ಆತ ಸಿಐಎಸ್ಎಫ್ ಹಾಗೂ ಸಿಆರ್ ಪಿಎಫ್ ನಲ್ಲಿ ಇರಲಿಲ್ಲ ಎಂಬುದು ತಿಳಿದು ಬಂದಿದೆ. ಆತ ಸಿವಿಲ್ ಪೊಲೀಸ್ ನಲ್ಲಿ ಕರ್ತವ್ಯ ನಿರ್ವಹಿಸಿರಬಹುದು ಎಂಬ ಮಾಹಿತಿ ದೊರೆತಿದೆ. ಆ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದವರು ಹೇಳಿದರು
ವಿಚಾರಣೆಯಲ್ಲಿ ಈ ಕೊಲೆ ಪ್ರಕರಣದಲ್ಲಿ ಆತನ ಪಾತ್ರ ಕಂಡು ಬಂದಲ್ಲಿ ಆತನನ್ನು ಬಂಧಿಸಿ ಕಾನೂನು ಪ್ರಕಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದರು





