ಉಡುಪಿ: ನಾಲ್ವರ ಹತ್ಯೆ ಪ್ರಕರಣ: ಆರೋಪಿ ನ.28 ರವರೆಗೆ ಪೊಲೀಸ್ ಕಸ್ಟಡಿಗೆ
ಉಡುಪಿ: ಕೆಮ್ಮಣ್ಣು ನೇಜಾರಿನ ಹಂಪನಕಟ್ಟೆ ಸಮೀಪದ ತೃಪ್ತಿ ಲೇ ಔಟ್‌ನ ಮನೆಯ ತಾಯಿ ಮತ್ತು ಮೂವರು ಮಕ್ಕಳನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿರುವ ಆರೋಪಿ ಪ್ರವೀಣ್ ಚೌಗಲೆಯನ್ನು ನ.28 ರ ವರೆಗೆ ಪೊಲೀಸ್ ಕಸ್ಟಡಿಗೆ ಬುಧವಾರ (ನ.15) ನ್ಯಾಯಾಲಯ ಒಪ್ಪಿಸಿದೆ.
ಉಡುಪಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಲಯದ ನ್ಯಾಯಾಧೀಶ ಶ್ಯಾಂಪ್ರಕಾಶ್ ಅವರು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದ್ದಾರೆ.





