ಮಲಗಿದ್ದ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆಗೈದ ಪತಿ
ಮಂಡ್ಯ: ಪ್ರೊಫೆಸರ್ ಒಬ್ಬ ಆಸ್ತಿ ಆಸೆಗಾಗಿ ತನ್ನ ಪತ್ನಿಯನ್ನು ಕೊಲೆಗೈದ ಘಟನೆ ಇಲ್ಲಿನ ವಿವಿ ನಗರ ಬಡಾವಣೆಯಲ್ಲಿ ನಡೆದಿದೆ. ಕೊಲೆಗೈದ ಬಳಿಕ ಸಹಜ ಸಾವೆಂದು ನಾಟಕವಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.
ಕೊಲೆಯಾದ ಮಹಿಳೆಯನ್ನು ಎಸ್.ಶೃತಿ (32) ಎಂದು ಗುರುತಿಸಲಾಗಿದೆ. ಹತ್ಯೆಗೀಡಾದವಳ ಪತಿ ಟಿ.ಎನ್.ಸೋಮಶೇಖರ್ (41) ಹಣದ ದಾಹಕ್ಕೆ ಬಿದ್ದು, ಮಲಗಿದ್ದ ಪತ್ನಿಯನ್ನು ದಿಂಬು ಹಾಗೂ ಬೆಡ್ ಶೀಟ್‍ನಿಂದ ಉಸಿರುಗಟ್ಟಿಸಿ ಕೊಲೆಗೈದಿದ್ದಾನೆ.





