ಕಾಪು: ಕಾರು ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿ ಮೃತ್ಯು
ಕಾಪು: ಕಟಪಾಡಿಯ ಭಾಗ್ಯಲಕ್ಷ್ಮೀ ಗ್ರಾನೈಟ್ಸ್ ಎದುರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಇನ್ನಂಜೆಯ ಉತ್ತಮ (33) ಎಂದು ಗುರುತಿಸಲಾಗಿದೆ.
ಉತ್ತಮ ಅವರು ಪೇಟಿಂಗ್ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಇವರು, ರಸ್ತೆಯನ್ನು ದಾಟಲು ರಸ್ತೆ ಬದಿ ನಿಂತುಕೊಂಡಿದ್ದರು. ಈ ವೇಳೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದ್ದಾರೆ.
ಇನ್ನು ಗಂಭೀರ ಗಾಯಗೊಂಡಿದ್ದ ಉತ್ತಮ, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.”