ಕುಂತಿಗುಡ್ಡ: ಪ್ರೇಯಸಿಯ ಕತ್ತು ಕುಯ್ದು ಬರ್ಬರವಾಗಿ ಹತ್ಯೆಗೈದ ಪ್ರಿಯಕರ
ಹಾಸನ: ಪ್ರೇಮ ವೈಫಲ್ಯದಿಂದ ಪ್ರಿಯಕರ ತನ್ನ ಪ್ರೇಯಸಿಯ ಕತ್ತು ಕುಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ಹಾಸನ ತಾಲೂಕಿನ ಕುಂತಿಗುಡ್ಡದಲ್ಲಿ ನಡೆದಿದೆ.
ಸುಚಿತ್ರಾ (20) ಕೊಲೆಯಾದ ಯುವತಿ. ತೇಜಸ್ (23) ಕೊಲೆ ಮಾಡಿರುವ ಪ್ರಿಯಕರ. ಸುಚಿತ್ರಾ ಆಲೂರು ತಾಲೂಕಿನ ಕವಳಗೆರೆ ಗ್ರಾಮದವಳಾಗಿದ್ದು, ಮೊಸಳೆಹೊಸಳ್ಳಿ ಎಂಜಿನಿಯರ್ ಕಾಲೇಜಿನಲ್ಲಿ ಬಿಇ ಮೆಕ್ಯಾನಿಕಲ್ ಪದವಿ ಓದುತ್ತಿದ್ದಳು.
ಮೂಲತಃ ಹಾಸನ ತಾಲೂಕಿನ ಶಂಕರನಹಳ್ಳಿ ಗ್ರಾಮದವನಾದ ತೇಜಸ್ ಸುಚಿತ್ರಾಳ ಕತ್ತು ಕೊಯ್ದು ಬರ್ಬರವಾಗಿ ಕೊಲೆಗೈದಿದ್ದಾನೆ.