ಖಾಸಗಿ ಬಸ್ ಬೈಕ್ ಗೆ ಢಿಕ್ಕಿ: ಮಹಿಳೆ ಸಾವು
ಆನೇಕಲ್: ಟಿವಿಎಸ್ ಎಕ್ಸೆಲ್ ಬೈಕ್‌ಗೆ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರು-ಬನ್ನೇರುಘಟ್ಟ ಮುಖ್ಯರಸ್ತೆಯ ಮೀನಾಕ್ಷಿ ದೇವಾಲಯದ ಬಳಿ ನಡೆದಿದೆ.
ಹುಳಿಮಾವು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಶ್ಯಾನಭೋಗನಹಳ್ಳಿ ನಿವಾಸಿ ಸೆಲ್ವಿ (೪೮) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪತಿ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದ ಸಂದರ್ಭ ಅವಘಡ ಸಂಭವಿಸಿದೆ. ಸೆಲ್ವಿ ಪತಿ ಮಾರತಹಳ್ಳಿಯಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದರು. ಮಗಳನ್ನು ಸಹಾ ಮಾರತಹಳ್ಳಿಗೆ ಮದುವೆ ಮಾಡಿಕೊಡಲಾಗಿತ್ತು.