ಮದುವೆ ಆಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ: ಬಿಜೆಪಿ ಸಂಸದನ ಪುತ್ರನ ವಿರುದ್ಧ FIR
ಬೆಂಗಳೂರು: ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಅವರ ಪುತ್ರ ರಂಗನಾಥ್ ಅವರು ಯುವತಿಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ, ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಆರೋಪ ಕೇಳಿಬಂದಿದೆ.
ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸರಾಗಿ ಕಾರ್ಯನಿರ್ವಹಿಸುತ್ತಿರುವ ರಂಗನಾಥ್ ಅವರ ವಿರುದ್ಧ ಬೆಂಗಳೂರು ಮೂಲದ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಿಸಿಕೊಂಡು ಇದೀಗ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಯುವತಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಒಂದೂವರೆ ವರ್ಷದ ಹಿಂದೆ ಪಾರ್ಟಿವೊಂದರಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡಿರುವ ರಂಗನಾಥ್, ಬಳಿಕ ಮೈಸೂರಿನ ಹೋಟೆಲ್ನಲ್ಲಿ ಆಕೆಯ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಆದರೆ ಈಗ ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.





