ಸುಳ್ಯ: ವಿಷ ಸೇವಿಸಿ ಯುವಕ ಆತ್ಮಹತ್ಯೆ
ಸುಳ್ಯ: ವ್ಯಕ್ತಿಯೋರ್ವರು ವಿಷ ಸೇವಿಸಿ ಆಸ್ಪತ್ರೆಗೆ ಸಾಗಿಸುವ ವೇಳೆ ಮಧ್ಯೆ ಕೊನೆಯುಸಿರೆಳೆದ ಘಟನೆ ಚೆಂಬು ಗ್ರಾಮದ ದೊಡ್ಡಜೆಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಚೆಂಬು ಗ್ರಾಮದ ದೊಡ್ಡಜೆ ಉದಯ (38) ಎಂದು ಗುರುತಿಸಲಾಗಿದೆ.
ರಾತ್ರಿ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮನೆಯವರು ಕೂಡಲೇ ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.