ಪುತ್ತೂರು : ಹಾವು ಕಚ್ಚಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಜೀವ ಮಠಂದೂರುರನ್ನು ಭೇಟಿಯಾದ ಅರುಣ್ ಕುಮಾರ್ ಪುತ್ತಿಲ
ಪುತ್ತೂರು : ಹಾವು ಕಚ್ಚಿದ ಹಿನ್ನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಶಾಸಕ ಸಂಜೀವ ಮಠಂದೂರು ರವರನ್ನು ಅರುಣ್ ಕುಮಾರ್ ಪುತ್ತಿಲ ರವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ರಾಜಕೀಯವಾಗಿ ಹಲವಾರು ಗೊಂದಲಗಳಿದ್ದರೂ ಪುತ್ತಿಲ ರವರು ಆಸ್ಪತ್ರೆಗೆ ತೆರಳಿ ಮಾಜಿ ಶಾಸಕರ ಆರೋಗ್ಯ ವಿಚಾರಿಸಿದ ಈ ನಡೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಈ ಸಂದರ್ಭದಲ್ಲಿ ಪುತ್ತಿಲ ಪರಿವಾರದ ಸದಸ್ಯರು ಉಪಸ್ಥಿತರಿದ್ದರು.
ನಿನ್ನೆ ಸಂಜೆ ವೇಳೆ ಮನೆಯಲ್ಲಿ ವಾಕಿಂಗ್ ಮಾಡುತ್ತಿದ್ದಾಗ ಮಠಂದೂರು ರವರಿಗೆ ಹಾವು ಕಚ್ಚಿದ್ದು, ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.