ಮಾಜಿ ಸಚಿವ ಆದಿತ್ಯ ಠಾಕ್ರೆ ವಿರುದ್ಧ ಎಫ್ಐಆರ್ ದಾಖಲು
ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ವಿರುದ್ಧ ಮುಂಬೈ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.
ವಾಣಿಜ್ಯ ನಗರಿಯ ಲೋವರ್ ಪರೇಲ್‌ನಲ್ಲಿ ಕಾಮಗಾರಿ ಮುಕ್ತಾಯಗೊಂಡ ಸೇತುವೆಯನ್ನು ಬೃಹನ್ಮುಂಬೈ ಮಹಾನಗರ ಪಾಲಿಕೆಯ ಅನುಮತಿ ಇಲ್ಲದೆ ಆದಿತ್ಯ ಠಾಕ್ರೆ ಉದ್ಘಾಟಿಸಿದ್ದಾರೆ ಎಂಬ ಆರೋಪದ ಹಿನ್ನೆಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಈ ಬಗ್ಗೆ ಮಾಜಿ ಸಚಿವ ಆದಿತ್ಯ ಠಾಕ್ರೆ ವಿರುದ್ಧ ಪಾಲಿಕೆ ಅಧಿಕಾರಿಗಳು ದೂರು ನೀಡಿದ್ದಾರೆ. ಆದಿತ್ಯ ಠಾಕ್ರೆ ಶಾಸಕರಾಗಿರುವ ವರ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಸೇತುವೆ ನಿರ್ಮಾಣಗೊಂಡಿದ್ದು, ಈ ಸೇತುವೆಯನ್ನು ಸಿಎಂ ಏಕನಾಥ ಶಿಂಧೆಯವರೇ ಉದ್ಘಾಟಿಸಬೇಕಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ ಅವರು, ಸೇತುವೆ ಉದ್ಘಾಟಿಸಲು ಮುಖ್ಯಮಂತ್ರಿಗಳಿಗೆ ಸಮಯವಿಲ್ಲ. 15 ದಿನಗಳ ಹಿಂದೆಯೇ ಕಾಮಗಾರಿ ಪೂರ್ಣವಾಗಿದೆ ಎಂದು ದೂರಿದ್ದಾರೆ.