May 16, 2026

ಕಾಂಗ್ರೆಸ್ ಮುಖಂಡ ರಾಮೋಜಿ ಗೌಡ ಕಛೇರಿ ಮೇಲೆ ಐಟಿ ದಾಳಿ

0
ramoji-gowda.jpg

ಬೆಂಗಳೂರು: ಕಾಂಗ್ರೆಸ್ ಮುಖಂಡ ರಾಮೋಜಿಗೌಡ ಅವರಿಗೆ ಸೇರಿದ ಹಲವೆಡೆ ಐಟಿ ದಾಳಿ ನಡೆದಿದೆ. ನೆಕ್ಸ್ಟ್‌ಪ್ಲೇಸ್ ಇನ್ಫೋ ಪ್ರೈವೇಟ್ ಲಿಮಿಟೆಡ್ ಕಚೇರಿ ಮೇಲೆ ದಾಳಿ ನಡೆದಿದೆ. ಐಟಿ ಅಧಿಕಾರಿಗಳು ಎಲ್ಲಾ ಕಚೇರಿ ಸಿಬ್ಬಂದಿಯ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.

15 ಜನ ಅಧಿಕಾರಿಗಳ ತಂಡ ಬೆಳಗ್ಗೆ 9 ಗಂಟೆಗೆ ಕಚೇರಿಗೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಇನ್ನು ಆರ್‌ಆರ್ ನಗರದ ಸಿರಿವೈಭವ ಜುವೆಲ್ಲರ್ಸ್ ಮೇಲೂ ಐಟಿ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದೆ. ಈ ಬಗ್ಗೆ ರಾಮೂಜಿ ಗೌಡ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಳಗ್ಗೆ ಹದಿನೈದು ಜನ ಐಟಿ ಅಧಿಕಾರಿಗಳು ಬಂದಿದ್ದರು. ನಮ್ಮ ಎರಡು ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. 150 ಜನರು ನಮ್ಮ ಕಂಪನಿಯಲ್ಲಿ ಕೆಲಸ ಮಾಡ್ತಾರೆ. ಒಂದು ಸಾಫ್ಟ್ ಕಂಪನಿ, ಮತ್ತೊಂದು ರಿಯಲ್ ಎಸ್ಟೇಟ್ ಕಂಪನಿ. ಸದ್ಯ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮಿ, ರಾಜಕಾರಣಿಯಾಗಿರುವ ರಾಮೋಜಿ ಗೌಡ ಈ ಹಿಂದೆ ಪದವೀಧರರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದರು. ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರ ಜೊತೆಯಲ್ಲಿ ಸಂಬಂಧ ಹೊಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!