ಉಡುಪಿ: ರಸ್ತೆ ದಾಟುತ್ತಿದ್ದ ದಂಪತಿಗೆ ಬೈಕ್ ಡಿಕ್ಕಿ: ಗಂಭೀರ ಗಾಯಗೊಂಡು ಪತ್ನಿ ಸಾವು
ಉಡುಪಿ: ತಮ್ಮ ಸಂಬಂಧಿಕರ ಮನೆಯಲ್ಲಿ ಮೆಹೆಂದಿ ಕಾರ್ಯಕ್ರಮಕ್ಕೆ ತೆರಳುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳ ಪೆಟ್ರೋಲ್ ಪಂಪ್ ಬಳಿ ರಸ್ತೆ ದಾಟುತ್ತಿದ್ದ ದಂಪತಿಗೆ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ್ದರೆ, ಪತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪಾಂಗಾಳ ಸಾದಾದಿ ಪಡುಮನೆ ಶೇಖರ್ ಶೆಟ್ಟಿ ಅವರ ಪತ್ನಿ ವಿಜಯ ಶೆಟ್ಟಿ (61) ಮೃತ ದುರ್ದೈವಿ. ಡಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಸ್ಥಳೀಯರು ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಜಯ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಶೇಖರ್ ಶೆಟ್ಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಜಯಾ ಅವರು ಪತಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.