December 16, 2025

ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ, ಮಗು ಸಾವು

0
image_editor_output_image-109541630-1700421533366.jpg

ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್‌ನ ಕಾಡುಗೋಡಿಯಲ್ಲಿ ನಡೆದಿದೆ.

ತಾಯಿ ಸೌಂದರ್ಯ ಹಾಗೂ ಮಗಳು ಲೀಲಾ ಸಾವನ್ನಪ್ಪಿದ ದುರ್ದೈವಿಗಳು. ತಮಿಳುನಾಡು ಮೂಲದ ಇವರು ಕಾಡುಗೋಡಿಯ ಗೋಪಾಲ್ ಕಾಲೋನಿಯಲ್ಲಿ ವಾಸವಾಗಿದ್ದರು.

ಇಂದು ಬೆಳಗಿನ ಜಾವ 5 ಗಂಟೆ ವೇಳೆಗೆ ದುರ್ಘಟನೆ ನಡೆದಿದೆ. ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಕಾಣಿಸದೇ ಅದನ್ನು ತುಳಿದ ಕಾರಣ ವಿದ್ಯುತ್ ಪ್ರವಹಿಸಿ ಇಬ್ಬರು ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

error: Content is protected !!