ಪ್ರಜ್ಞೆ ತಪ್ಪಿ ಬಿದ್ದ ಪತ್ನಿಯನ್ನು ನೇಣುಬಿಗಿದು ಕೊಲೆಗೈದ ಪತಿ
ರಾಯಚೂರು: ಪ್ರಜ್ಞೆ ತಪ್ಪಿ ಬಿದ್ದ ಪತ್ನಿಯನ್ನು ಪತಿ ನೇಣುಬಿಗಿದು ಕೊಲೆ ಮಾಡಿರುವ ಘಟನೆ ರಾಯಚೂರಿನ ಸಿಂಧನೂರು ನಗರದ ಪಟೇಲವಾಡಿಯಲ್ಲಿ ನಡೆದಿದೆ.
ಭುವನೇಶ್ವರಿ (31) ಕೊಲೆಯಾದ ಮಹಿಳೆ. ಘಟನೆ ಬಳಿಕ ಪರಾರಿಯಾಗಿದ್ದ ಆರೋಪಿ ಪತಿ ನಾಗರಾಜ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
14 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿ ಆರಂಭದಲ್ಲಿ ಚನ್ನಾಗಿಯೇ ಇದ್ದರು. ಆದರೆ ಇತ್ತೀಚೆಗೆ ಆರೋಪಿ ಪತಿ ನಾಗರಾಜ್ ಪ್ರತಿನಿತ್ಯ ಮದ್ಯಸೇವಿಸಿ ಬಂದು ಜಗಳ ಮಾಡುತ್ತಿದ್ದ.