ಸೂಟ್‌ಕೇಸ್‌ನಲ್ಲಿ ಮಹಿಳೆಯ ಮೃತದೇಹ ಪತ್ತೆ
ಮುಂಬೈ: ಕುರ್ಲಾದಲ್ಲಿ ಸೂಟ್‌ಕೇಸ್‌ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈ ಪೊಲೀಸರ ಪ್ರಕಾರ, ಭಾನುವಾರ ಮಧ್ಯಾಹ್ನ 12.30 ರ ಸುಮಾರಿಗೆ ರಸ್ತೆಯಲ್ಲಿ ಸೂಟ್ಕೇಸ್ ಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು, ಅವರು ಬಂದು ಸೂಟ್ಕೇಸ್ ಅನ್ನು ತೆರೆದಾಗ ಶವ ಪತ್ತೆಯಾಗಿದೆ.
ಮೆಟ್ರೊ ಯೋಜನೆಯ ಕಾಮಗಾರಿ ನಡೆಯುತ್ತಿರುವ ಶಾಂತಿನಗರದ ಸಿಎಸ್‌ಟಿ ರಸ್ತೆಯಲ್ಲಿ ಸೂಟ್‌ಕೇಸ್ ಬಿದ್ದಿರುವ ಬಗ್ಗೆ ಮಧ್ಯಾಹ್ನ 12.30ರ ಸುಮಾರಿಗೆ ಪೊಲೀಸರಿಗೆ ನೀಡಲಾಗಿತ್ತು.
ಪೊಲೀಸರು ಸ್ಥಳಕ್ಕೆ ಧಾವಿಸಿದಾಗ ಸೂಟ್‌ಕೇಸ್‌ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.