ಕಡಬ: ನೆಕ್ಕಿತ್ತಡ್ಕ ದರ್ಗಾದ ಬಾಗಿಲಿನ ಬೀಗ ಮುರಿದು ನಗದು ಕಳವು
ಕಡಬ: ಕಡಬ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ದರ್ಗಾದ ಬಾಗಿಲಿನ ಬೀಗ ಮುರಿದಿರುವ ಕಳ್ಳರು ಒಳಗಿದ್ದ ಹಣವನ್ನು ಕದ್ದು, ಪರಾರಿಯಾಗಿರುವ ಘಟನೆ ಸೋಮವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಸೋಮವಾರ ತಡರಾತ್ರಿ ಸುಮಾರು 2.20ರ ವೇಳೆಗೆ ಇಬ್ಬರು ಕಳ್ಳರು ಬಾಗಿಲಿನ ಬೀಗ ಮುರಿದು ಒಳ ನುಗ್ಗಿ ಹಣವನ್ನು ಕಳ್ಳತನ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕಳೆದ ವರ್ಷ ಕೂಡಾ ಇಲ್ಲಿನ ಬಾಗಿಲನ್ನು ಮುರಿದು ಕಳ್ಳತನ ಮಾಡಲಾಗಿದ್ದು, ಇದುವರೆಗೂ ಕಳ್ಳರ ಪತ್ತೆಯಾಗಿಲ್ಲ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.