December 18, 2025

ಎರಡನೇ ಪೋಕ್ಸೊ ಪ್ರಕರಣ: ಮುರುಘಾ ಶ್ರೀಗಳು ಮತ್ತೆ ಅರೆಸ್ಟ್
 

0
hr-201123-muruga.jpg


ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಈಗಾಗಲೇ 14 ತಿಂಗಳು ಜೈಲು ಶಿಕ್ಷೆ ಅನುಭವಿಸಿದ್ದರು. ಸುಮಾರು 14 ತಿಂಗಳ ಬಳಿಕ ಹೈಕೋರ್ಟ್‌ನಿಂದ ಜಾಮೀನು ಪಡೆದು ಬಿಡುಗಡೆ ಆಗಿದ್ದರು.

ಮೊದಲ ಪೋಕ್ಸೋ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿ ದಾವಣಗೆರೆಯ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಿದ್ದ ಸ್ವಾಮೀಜಿಯನ್ನು ಪುನಃ ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ.

ಸ್ವಾಮೀಜಿ ಮೇಲೆ ಇನ್ನೊಂದು ಪೋಕ್ಸೋ ಕೇಸ್‌ ದಾಖಲಾಗಿದ್ದು, ಇದರಲ್ಲಿ ಬಾಡಿ ವಾರೆಂಟ್‌ನಲ್ಲಿ ಹೊರಗಿದ್ದರು. ಈಗ ಪುನಃ ಮುರುಘಾ ಸ್ವಾಮೀಜಿ ಜಾಮೀನಿನ ಮೇಲೆ ಹೊರಗಿದ್ದಲ್ಲಿ ಸಾಕ್ಷ್ಯ ನಾಶ ಮಾಡುವ ಸಾಧ್ಯತೆಯಿದೆ. ಆದ್ದರಿಂದ ಅವರನ್ನು ಬಂಧಿಸುವಂತೆ ದೂರುದಾರರು ಮನವಿ ಮಾಡಿದ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳ 2ನೇ ಪೋಕ್ಸೋ ಪ್ರಕರಣದಲ್ಲಿ ಬಂಧಿಸುವಂತೆ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶರಾದ ಬಿ.ಕೆ ಕೋಮಲಾರಿಂದ ಆದೇಶ ಹೊರಡಿಸಿದ್ದರು.

ಮುರುಘಾಶ್ರೀ ಬಂಧಿಸಿದ ಪೊಲೀಸರು ಚಿತ್ರದುರ್ಗಕ್ಕೆ ಕೊಂಡೊಯ್ದು ಅಲ್ಲಿ ಜಿಲ್ಲಾ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆ ಮಾಡಸಲು ಕರೆದೊಯ್ಯಲಿದ್ದಾರೆ. ಹೀಗಾಗಿ, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಬಿಗಿ ಪೊಲೀಸ್‌ ಬಂದಬಸ್ತ್‌ ವ್ಯವಸ್ಥೆ ಮಾಡಲಾಗಿದೆ. ನಂತರ, ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಈ ವೇಳೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿದರೆ ಪೊಲೀಸರು ಸ್ವಾಮೀಜಿಯನ್ನು ವಶಕ್ಕೆ ಪಡೆಯಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!