ಹಾಡಹಗಲೇ ಜನನಿಬೀಡ ಪ್ರದೇಶದಲ್ಲಿ ಯುವತಿಯನ್ನು ಅಪಹರಿಸಿದ ಮುಸುಕುಧಾರಿಗಳು
ಭೋಪಾಲ್: ಹಾಡಹಗಲೇ ಜನನಿಬೀಡ ಪ್ರದೇಶದಲ್ಲಿ ಯುವತಿಯೊಬ್ಬಳನ್ನು ಇಬ್ಬರು ಮುಸುಕುಧಾರಿಗಳು ಅಪಹರಿಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ.
ಯುವತಿ ಬಸ್‍ನಲ್ಲಿ ಬಂದು, ಆಕೆಯ ಸಹೋದರನಿಗಾಗಿ ಪೆಟ್ರೋಲ್ ಬಂಕ್ ಒಂದರ ಬಳಿ ಕಾಯುತ್ತಿದ್ದಾಗ ಆಕೆಯ ಅಪಹರಣವಾಗಿದೆ. ಅಪಹರಣಕಾರರಲ್ಲಿ ಓರ್ವ ಹೆಲ್ಮೆಟ್ ಧರಿಸಿದ್ದರೆ, ಮತ್ತೋರ್ವ ಮುಖಕ್ಕೆ ಬಟ್ಟೆಯನ್ನು ಸುತ್ತಿಕೊಂಡಿದ್ದ. ಯುವತಿಯನ್ನು ಅಪಹರಿಸುತ್ತಿರುವ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.