ಲವ್ ಫೈಲ್ಯೂರ್: ವಿಷ ಸೇವಿಸಿ ಯುವಕ ಆತ್ಮಹತ್ಯೆ
ಶಿವಮೊಗ್ಗ: ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಆಡುಗೋಡಿ ಗ್ರಾಮದ ವಿಬೋದ್(21) ಬಿಎ ಪದವೀಧರ ಎನ್ನಲಾಗಿದೆ..
ಜಮೀನಿಗೆ ಹೋಗಿ ಬಂದ ವಿನೋದ್ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದು, ಲವ್ ವಿಷಯದಲ್ಲಿ ನಡೆದಿರಬಹುದು ಎಂದು ಶಂಕಿಸಲಾಗಿದೆ. ಅಸ್ವಭಾವಿಕ ಸಾವಿನ ಪ್ರಕರಣದ ಅಡಿಯಲ್ಲಿ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.