ಮಂಗಳೂರು: ತಾಯ್ನಾಡಿಗೆ ಬಂದ ಕಡಬದ ನಿವಾಸಿ ಚಂದ್ರಶೇಖರ್
ಮಂಗಳೂರು: ಪ್ರಕರಣವೊಂದರಲ್ಲಿ ಸೌದಿ ಅರೇಬಿಯಾದಲ್ಲಿ ಜೈಲು ಪಾಲಾಗಿ ಕೊನೆಗೂ ಬಿಡುಗಡೆಯಾಗಿ ತಾಯ್ನಾಡಿಗೆ ಮರಳಿ ಬಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನಿವಾಸಿ ಚಂದ್ರಶೇಖರ್ಗೆ ಮನೆ ಮಂದಿ ಖುಷಿಯಿಂದ ಸ್ವಾಗತಿಸಿದರು.
ರಿಯಾದ್ ನಿಂದ ಮುಂಬೈಗೆ ಬಂದು ಅಲ್ಲಿಂದ ಮಂಗಳೂರಿಗೆ ಆಗಮಿಸಿದ ಚಂದ್ರಶೇಖರ್ ತಾನು ಮಾಡದ ತಪ್ಪಿಗೆ 11 ತಿಂಗಳಿಂದ ಸೌದಿ ಜೈಲಿನಲ್ಲಿ ಬಂಧಿಯಾಗಿದ್ದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೊರ ಬರುತ್ತಲೇ ಚಂದ್ರು ಭಾವುಕರಾಗಿದ್ದರು.
ಮಗನನ್ನು ಅಪ್ಪಿ ಹಿಡಿದು ಆನಂದ ಭಾಷ್ಪ ಸುರಿಸಿದ ತಾಯಿ ಹೇಮಾವತಿಯನ್ನು ಕಂಡ ಅಲ್ಲಿದ್ದವರ ಕಣ್ಣಾಲಿಗಳಲ್ಲಿಯೂ ನೀರು ತುಂಬಿಕೊಂಡಿತ್ತು.