ಕಡೂರು: ಬಿರಿಯಾನಿ ತಿಂದು 17 ಜನ ಅಸ್ವಸ್ಥ
ಚಿಕ್ಕಮಗಳೂರು: ಭಾನುವಾರ ಮಾಡಿದ್ದ ಬಿರಿಯಾನಿಯನ್ನು ಸೋಮವಾರ ತಿಂದು 17 ಜನ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಮರವಂಜಿ ಗ್ರಾಮದ ಮನೆಯೊಂದರಲ್ಲಿ ಖಾಸಗಿ ಕಾರ್ಯಕ್ರಮವೊಂದು ನಡೆದಿತ್ತು. ಕಾರ್ಯಕ್ರಮ ಮುಗಿದ ಬಳಿಕ ಸಂಬಂಧಿಕರಿಗಾಗಿ ಬಿರಿಯಾನಿ ತಯಾರಿಸಿದ್ದರು. ಭಾನುವಾರ ಮಾಡಿದ್ದ ಬಿರಿಯಾನಿಯನ್ನು ಸೋಮವಾರ ತಿಂದ 17 ಜನ ಗ್ರಾಮಸ್ಥರು ಅಸ್ವಸ್ಥರಾಗಿ ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಮರವಂಜಿ ಗ್ರಾಮದ ಮನೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ತಯಾರಿಸಿದ ಬಿರಿಯಾನಿಯನ್ನು ಸೋಮವಾರ ಕುಟುಂಬಸ್ಥರು ಹಾಗೂ ಕೆಲ ಗ್ರಾಮಸ್ಥರು ಸೇವಿಸಿದ್ದಾರೆ. ಸೇವಿಸಿದ ಸ್ವಲ್ಪ ಹೊತ್ತಿನ ಬಳಿಕ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡ ಹಿನ್ನೆಲೆ ಗ್ರಾಮಸ್ಥರು ಅಂಬುಲೆನ್ಸ್‌ನಲ್ಲಿ ಎಲ್ಲರನ್ನೂ ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.