ತಲೆಮರೆಸಿಕೊಂಡಿದ್ದ ರೌಡಿಶೀಟರ್ ಬಂಧನ
ಬೆಂಗಳೂರು :ಮೃತಪಟ್ಟಿರುವುದಾಗಿ ಬಿಂಬಿಸಿಕೊಂಡು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿ ಆಸಾಮಿಯನ್ನು ಸಿಸಿಬಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ವೈಟ್ ಫೀಲ್ಡ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ ಬಂಧಿತ ಆರೋಪಿ.
ಮತ್ತೋರ್ವ ಕುಖ್ಯಾತ ರೌಡಿ ಕಾಡುಬೀಸನಹಳ್ಳಿ ಸೋಮನ ಕಾರು ಚಾಲಕನ ಹತ್ಯೆ ಪ್ರಕರಣದ ಆರೋಪಿಯಾಗಿದ್ದ ಮಲ್ಲಿಕಾರ್ಜುನ, ಬಳಿಕ ರಾಜಾನುಕುಂಟೆ ವ್ಯಾಪ್ತಿಯಲ್ಲಿಯೂ ಒಂದು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ.
ಮನೆ ಬಳಿ ಹೋಗಿದ್ದ ಪೊಲೀಸರು ಕುಟುಂಬಸ್ಥರು, ಗೆಳೆಯರು, ಪರಿಚಿತರನ್ನು ವಿಚಾರಿಸಿದಾಗ ಆತ ಮೃತಪಟ್ಟಿದ್ದಾನೆ ಎಂದಿದ್ದರು. ಅಲ್ಲದೇ ಮಲ್ಲಿಕಾರ್ಜುನ ಮೃತಪಟ್ಟಿರುವ ದಾಖಲೆಗಳನ್ನು ಕುಟುಂಬಸ್ಥರು ತೋರಿಸಿದ್ದರು.
ಅದರೂ ಸಹ ಅನುಮಾನಗೊಂಡ ಸಿಸಿಬಿ ಪೊಲೀಸರು ತಲಾಶ್ ನಡೆಸಿ ಊರೂರು ಸುತ್ತುತ್ತ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.