December 23, 2024

ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಬರಲ್ಲ: ಪುತ್ತೂರು ಕಾಂಗ್ರೆಸ್‌ ಶಾಸಕ ಅಶೋಕ್ ರೈ

0

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆಯೋಜನೆಗೊಂಡ ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರು ಆಗಮಿಸುವುದಿಲ್ಲ ಎಂದು ಪುತ್ತೂರು ಕಾಂಗ್ರೆಸ್‌ ಶಾಸಕ ಮತ್ತು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ರೈ ತಿಳಿಸಿದ್ದಾರೆ.

ಇದು ದೊಡ್ಡ ಕಾರ್ಯಕ್ರಮ ಆಗಿರುವ ಕಾರಣ ಬೇರೆ ಬೇರೆ ಸಂಘಟನೆಯವರು ಬಂದು ಅನೇಕ ಮನವಿ ಮಾಡುತ್ತಾರೆ. ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಬಂದು ವೇದಿಕೆಗೆ ಅವರ ಹೆಸರನ್ನು ಇಡಲು ಹೇಳುತ್ತಾರೆ. ಸಿದ್ದಿ ಜನಾಂಗದವರು ಬಂದು ಅವರನ್ನು ಆಹ್ವಾನಿಸುವಂತೆ ಕೇಳಿದ್ದರು. ಆದರೆ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಮೊನ್ನೆಯೇ ನಾನು ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಹೇಳಿದರು.

ನವೆಂಬರ್ 25 ಮತ್ತು 26ರಂದು ಅರಮನೆ ಮೈದಾನದಲ್ಲಿ ಕಂಬಳ ಆಯೋಜನೆಗೊಂಡಿದೆ. ಕುಸ್ತಿಪಟುಗಳಿಗೆ ನಡೆಯಲಿರುವ ಸನ್ಮಾನ ಕಾರ್ಯಕ್ರಮಕ್ಕೆ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಬೇಕಿತ್ತು.

 

 

ಮಹಿಳಾ ಕುಸ್ತಿ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪವನ್ನು ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಎದುರಿಸುತ್ತಿದ್ದು, ದೆಹಲಿಯಲ್ಲಿ ನಡೆಸಿದ ಪ್ರತಿಭಟನೆ ದೇಶದಾದ್ಯಂತ ಸದ್ದು ಮಾಡಿತ್ತು.

Leave a Reply

Your email address will not be published. Required fields are marked *

error: Content is protected !!