ಮಂಗಳೂರು: ಲಾರಿ-ದ್ವಿಚಕ್ರ ವಾಹನದ ನಡುವೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು
ಮಂಗಳೂರು: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ನಡೆದು ದ್ವಿಚಕ್ರ ವಾಹನ ಸವಾರ ಮೃತ ಪಟ್ಟ ಘಟನೆ ಗುರುಪುರ ಕೈಕಂಬದಲ್ಲಿ ನಡೆದಿದೆ.
ಮೃತರನ್ನು ಅಡ್ಡೂರು ಕಾಂಜಿಲಕೊಡಿ ನಿವಾಸಿ ಡಿ ಎಸ್ ರೆಹಮಾನ್ ಎಂದು ಗುರುತಿಸಲಾಗಿದೆ.
ಇಂದು ಮಧ್ಯಾಹ್ನ 2.30ರ ಸುಮಾರಿಗೆ ಡಿ ಎಸ್ ರೆಹಮಾನ್ ಚಲಿಸುತ್ತಿದ್ದ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ಸವಾರ ರೆಹಮಾನ್‌ನನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.