December 23, 2024

ಉಡುಪಿ: ತಾಯಿ ಮಕ್ಕಳ ಹತ್ಯೆ ಪ್ರಕರಣ:
ಮನೆಗೆ ಕಥೊಲಿಕ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರ ನಿಯೋಗ ಭೇಟಿ, ಸಾಂತ್ವನ

0

ಉಡುಪಿ: ಇತ್ತೀಚೆಗೆ ನೇಜಾರಿನಲ್ಲಿ ನಡೆದ ತಾಯಿ ಮಕ್ಕಳ ಕೊಲೆ ನಡೆದ ಮನೆಗೆ ಉಡುಪಿ ಕಥೊಲಿಕ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ| ಜೆರಾಲ್ಡ್ ಐಸಾಕ್ ಲೋಬೊ ಅವರ ಪ್ರತಿನಿಧಿಗಳು ಮತ್ತು ಸಮನ್ವಯ ಸೌಹಾರ್ದ ಸಮಿತಿ ತೊಟ್ಟಾಂ ಇದರ ಪದಾಧಿಕಾರಿಗಳು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ ವೇಳೆ ಮಾತನಾಡಿದ ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಟ ಗುರು ಮೊನ್ಷಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಘಟನೆಯ ಕುರಿತು ಧರ್ಮಾಧ್ಯಕ್ಷರು ಅತೀವ ಆಘಾತ ಮತ್ತು ನೋವನ್ನು ವ್ಯಕ್ತಪಡಿಸಿದ್ದು, ಇಂತಹ ಘಟನೆ ಬುದ್ದಿವಂತರ ಜಿಲ್ಲೆಯಾದ ಉಡುಪಿಯಲ್ಲಿ ನಡೆದಿರುವುದು ಆಘಾತಕಾರಿಯಾಗಿದ್ದು, ನೂರ್ ಮೊಹ್ಮದ್ ಮತ್ತು ಅವರ ಪುತ್ರ ಹಾಗೂ ಇಡೀ ಕುಟುಂಬದ ನೋವಿನಲ್ಲಿ ಕ್ರೈಸ್ತ ಸಮುದಾಯ ಭಾಗಿಯಾಗಿದೆ. ಘಟನೆಗೆ ಕಾರಣನಾದ ಆರೋಪಿಯನ್ನು ಕೂಡಲೇ ಬಂಧಿಸಿರುವ ಜಿಲ್ಲೆಯ ಪೊಲೀಸರ ಕಾರ್ಯ ಶ್ಲಾಘನೀಯವಾಗಿದ್ದು. ನೂರ್ ಮಹಮ್ಮದ್ ಮತ್ತವರ ಕುಟುಂಬಕ್ಕೆ ಸಾಂತ್ವಾನವನ್ನು ಹೇಳಿದರು.

ಈ ವೇಳೆ ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ, ಸಮನ್ವಯ ಸೌಹಾರ್ದ ಸಮಿತಿ ತೊಟ್ಟಂ ಇದರ ಸಂಚಾಲಕರಾದ ಆಗ್ನೆಲ್ ಫೆರ್ನಾಂಡಿಸ್, ಸದಸ್ಯರಾದ ಸುನಿಲ್ ಫೆರ್ನಾಂಡಿಸ್, ಲೆಸ್ಲಿ ಆರೋಝಾ, ಬ್ಲೆಸಿಲ್ಲಾ ಕ್ರಾಸ್ತಾ, ಪ್ರಸಾದ್, ಪ್ರಭಾಕರ್ ಕಾಂಗ್ರೆಸ್ ಮುಖಂಡ ಎಮ್ ಎ ಗಫೂರ್ ಹಾಗೂ ಇತರರು ಉಪಸ್ಥಿತರಿದ್ದರು.

 

 

Leave a Reply

Your email address will not be published. Required fields are marked *

error: Content is protected !!