ಶೋಕಿಗಾಗಿ ಕಳ್ಳತನ: 1 ಕೆಜಿ ಚಿನ್ನ ಸಹಿತ ಆರೋಪಿಯ ಬಂಧನ
ಬೆಂಗಳೂರು: ದೊಡ್ಡ ದೊಡ್ಡ ಬಂಗಲೆಗಳನ್ನೇ ಟಾರ್ಗೆಟ್ ಮಾಡಿ ಕೆಜಿ ಕೆಜಿ ಚಿನ್ನ ದೋಚುತ್ತಿದ್ದ ಖತರ್ನಾಕ್ ಕಳ್ಳನನ್ನು ಗೋವಿಂದರಾಜನಗರ ಪೊಲೀಸರು ಹೆಡೆಮುರಿಕಟ್ಟಿದ್ದಾರೆ.
ಬೆಂಗಳೂರಿನ ಸೆಲೆಬ್ರಿಟಿ ಮನೆಗಳ್ಳ ಕಾರ್ತಿಕ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ ಅರೆಸ್ಟ್ ಆಗಿದ್ದಾನೆ. ಆರೋಪಿ ಬಳಿಯಿಂದ ಬರೋಬ್ಬರಿ 1 ಕೆಜಿ 200 ಗ್ರಾಂ ಕದ್ದ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈತನ ವಿರುದ್ಧ ಬೆಂಗಳೂರಿನಲ್ಲಿ 83 ಕ್ಕೂ ಹೆಚ್ಚು ಮನೆಗಳ್ಳತನ ಕೇಸ್‌ಗಳಿವೆ. ನಗರ ಮಾತ್ರವಲ್ಲದೆ ಕರ್ನಾಟಕದ ಬೇರೆ ಭಾಗಗಳಲ್ಲಿಯೂ ಕಳ್ಳತನದ ಆರೋಪವಿದೆ