ಕಾಸರಗೋಡು: ಶಬರಿಮಲೆ ಕ್ಷೇತ್ರಕ್ಕೆ ತೆರಳಿದ್ದ ಖಾಸಗಿ ಬಸ್ ಪಲ್ಟಿ
ಕಾಸರಗೋಡು: ಶಬರಿಮಲೆ ಕ್ಷೇತ್ರಕ್ಕೆ ತೆರಳಿ ಹಿಂದಿರುಗುತ್ತಿದ್ದ ಆಂಧ್ರ ಪ್ರದೇಶದ ಯಾತ್ರಿರನ್ನು ಒಳಗೊಂಡ ಖಾಸಗಿ ಬಸ್ಸೊದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು 7 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಕೇರಳದ ಪತ್ತನಂತಿಟ್ಟ ಜಿಲ್ಲೆಯ ನೀಲಕಲ್ ಸಮೀಪದ ಲಾಹಾ ಎಂಬಲ್ಲಿ ನಿನ್ನೆ ನಡೆದಿದೆ.
ಆಂಧ್ರ ಪ್ರದೇಶದ ನೋಂದಣಿ ಸಂಖ್ಯೆ ಹೊಂದಿರುವ ಮಿನಿ ಬಸ್‌ನಲ್ಲಿ 36 ಮಂದಿ ಪ್ರಯಾಣಿಸುತ್ತಿದ್ದರು. ಲಾಹಾ ಎಂಬಲ್ಲಿ ತಿರುವು ಪಡೆಯುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು, ಡಿವೈಡರ್ ಗೆ ಢಿಕ್ಕಿ ಹೊಡೆದು ಬಳಿಕ ರಸ್ತೆ ಬದಿ ಮಗುಚಿ ಬಿದ್ದಿದೆ.