ಜಾತ್ರೆಯಲ್ಲಿ ಹೆಜ್ಜೇನು ದಾಳಿ: 30ಕ್ಕೂ ಹೆಚ್ಚು ಜನರಿಗೆ ಗಾಯ, 7 ಜನರ ಸ್ಥಿತಿ ಗಂಭೀರ
ಮಂಡ್ಯ: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಪುರಾಣ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಮೇಲುಕೋಟೆಯ ಜಾತ್ರ ಸಂರ್ಭದಲ್ಲಿ ಹೆಜ್ಜೇನು ದಾಳಿನಡೆಸಿದ್ದು, ಘಟನೆಯಲ್ಲಿ 30ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, 17 ಜನರ ಗಂಭೀರ ಸ್ಥಿತಿಯಲ್ಲಿದ್ದಾರೆ.
ಪ್ರತಿ ವರ್ಷ ಮೇಲುಕೋಟೆಯಲ್ಲಿ ತೊಟ್ಟಿಲುಮಡು ಜಾತ್ರೆ ನಡೆಯುತ್ತದೆ. ಹೀಗಾಗಿ ಬುಧವಾರ ಅಷ್ಟತೀರ್ಥೋತ್ಸವವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಆಗಮಿಸಿದ್ದರು. ಈ ವೇಳೆ ಜೇನುಗೂಡಿದ್ದ ಮರದ ಸಮೀಪವೇ ಭಕ್ತರು ಕರ್ಪೂರ ಹಚ್ಚಿದ್ದರು. ಈ ಹಿನ್ನಲೆ ಕರ್ಪೂರದ ಹೊಗೆಯಿಂದ ಏಕಾಎಕಿ ಹೆಜ್ಜೇನು ದಾಳಿ ಮಾಡಿದೆ ಎನ್ನಲಾಗಿದೆ.
ಇನ್ನು ಕೂಡಲೇ ಭಕ್ತಾಧಿಗಳು ಹೆಜ್ಜೇನು ದಾಳಿಯಿಂದ ತಪ್ಪಿಸಿಕೊಳ್ಳಲು ದಿಕ್ಕಪಾಲಾಗಿ ಓಡಿದ್ದಾರೆ. ಈ ಸಂರ್ಭದಲ್ಲಿ ಹಲವಾರು ಮಂದಿಯ ಮೇಲೆ ಹೆಜ್ಜೇನು ದಾಳಿ ನಡೆಸಿದೆ. ಹೆಜ್ಜೇನು ದಾಳಿಗೊಳಗಾದವರಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರ ಗಾಯಗೊಂಡ 17 ಜನರನ್ನು ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.