ಬೈಪಾಸ್ ಬಳಿ ಆಟೊ, ಕ್ಯಾಂಟರ್ ಭೀಕರ ಅಪಘಾತ: ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ನಗರದ ನಾಗಪ್ಪ ಬ್ಲಾಕ್ ಬೈಪಾಸ್ ಬಳಿ ಆಟೋ ಮತ್ತು ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ವಿದುರಾಶ್ವತ್ಥದ ಕಡೆಯಿಂದ ಬಂದ ಕಾಲೇಜು ವಿದ್ಯಾರ್ಥಿಗಳಿದ್ದ ಆಟೋಗೆ ನಾಗಪ್ಪ ಬ್ಲಾಕ್ ಬೈಪಾಸ್ ತಿರುವಿನಲ್ಲಿ ಬೈಪಾಸ್ ರಸ್ತೆಯಿಂದ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ.
ಆಟೋ ಜಖಂ ಆಗಿದ್ದು, ಗಾಯಾಳು ವಿದ್ಯಾರ್ಥಿಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕೆಲವು ವಿದ್ಯಾರ್ಥಿಗಳ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.