ಮಿಲ್ಲತ್ ನಗರದಲ್ಲಿ ಮಹಿಳೆ ಅನುಮಾನಾಸ್ಪದವಾಗಿ ಸಾವು: ಪತಿಯ ವಿರುದ್ಧ FIR ದಾಖಲು
ಕೋಲಾರ: ಮಹಿಳೆಯೊಬ್ಬಳು ಇಲ್ಲಿನ ಮಿಲ್ಲತ್ ನಗರದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಅನುಮಾನ ವ್ಯಕ್ತವಾಗಿದೆ.
ಮೃತಳನ್ನು ಮಿಲ್ಲತ್ ನಗರದ ಮಾಹೇನೂರ್ (22) ಎಂದು ಗುರುತಿಸಲಾಗಿದೆ. ಆಕೆಯ ಪತಿ ಸಯ್ಯದ್ ಶುಹೇಬ್ ಎಂಬಾತ ಕೊಲೆ ಮಾಡಿ ಗ್ಯಾಸ್ ಗೀಸರ್ ಲೀಕ್‍ನಿಂದ ಸಾವನ್ನಪ್ಪಿದ್ದಾಳೆ ಎಂದು ಬಿಂಬಿಸಲು ಯತ್ನಿಸುತ್ತಿದ್ದಾನೆ.
ಅಲ್ಲದೇ ಆತ ಕಳೆದ ಕೆಲವು ತಿಂಗಳುಗಳಿಂದ ಹಣ, ಜಾಗ ಹಾಗೂ ಬುಲೆಟ್ ಬೈಕ್‍ಗಾಗಿ ಪತ್ನಿಯ ತವರಿನಿಂದ ಹಣ ತರುವಂತೆ ಪೀಡಿಸುತ್ತಿದ್ದ ಎಂದು ಸಂಬಂಧಿಕರು ಆರೋಪಿಸಿದ್ದಾರೆ.