ರೈಲಿಗೆ ಸಿಲುಕಿ ರೈಲ್ವೆ ಸ್ಟೇಷನ್ ಮಾಸ್ಟರ್ ಸಾವು
ಶಿವಮೊಗ್ಗ: ರೈಲಿಗೆ ಸಿಲುಕಿ ರೈಲ್ವೆ ಸ್ಟೇಷನ್ ಮಾಸ್ಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ಕುಂಸಿ ಬಳಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಸ್ಟೇಷನ್ ಮಾಸ್ಟರ್ ಅನ್ನು ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ. ಮೃತ ಅರುಣ್ ಕುಮಾರ್ ಬಿಹಾರ ಮೂಲದವರಾಗಿದ್ದು, ಕುಂಸಿ ರೈಲ್ವೆ ನಿಲ್ದಾಣದಲ್ಲಿ ಸ್ಟೇಷನ್ ಮಾಸ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮಂಗಳವಾರ ರಾತ್ರಿ ಬೆಂಗಳೂರಿನಿಂದ ರೈಲಿನಲ್ಲಿ ಬಂದ ಅರುಣ್ ಕುಮಾರ್ ಬುಧವಾರ ಬೆಳಗಿನ ಜಾವ ಕುಂಸಿ ಬಳಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.