ಸ್ಟೇರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ KSRTC ಬಸ್
ರಾಮನಗರ: ಸ್ಟೇರಿಂಗ್ ಕಟ್ ಆದ ಪರಿಣಾಮ ಸಾರಿಗೆ ಬಸ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಮಾಗಡಿಯ ಬಾಚೇನಹಟ್ಟಿ ಗ್ರಾಮದ ಬಳಿ ನಡೆದಿದೆ.
ಬಸ್ ಬೆಂಗಳೂರಿನಿಂದ ಮಾಗಡಿ ಮಾರ್ಗವಾಗಿ ಹುಲಿಯೂರು ದುರ್ಗಕ್ಕೆ ತೆರಳುತ್ತಿತ್ತು. ಈ ವೇಳೆ ಬಸ್ ಸ್ಟೇರಿಂಗ್ ಕಟ್ ಆಗಿದೆ. ಇದರಿಂದ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ.
ಸದ್ಯ ವಿದ್ಯುತ್ ಕಡಿತವಾಗಿದ್ದರಿಂದ ಭಾರೀ ಅನಾಹುತ ತಪ್ಪಿದೆ.
ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್‍ನಲ್ಲಿದ್ದ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.