ಉಡುಪಿ: ಕಾರು ಢಿಕ್ಕಿ ಹೊಡೆದು ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆ ಸಾವು
ಉಡುಪಿ : ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಘಟನೆ ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಮೂಳೂರು ಎಂಬಲ್ಲಿ ಮಧ್ಯಾಹ್ನ ನಡೆದಿದೆ.
ಮೂಳೂರು ಮಹಾಲಕ್ಷ್ಮಿ ನಗರದ ನಿವಾಸಿ ಲೀಲಾವತಿ ಸಾಲಿಯಾನ್ (65) ಮೃತ ದುರ್ದೈವಿಯಾಗಿದ್ದಾರೆ.
ಲೀಲಾವತಿ ಮೂಳೂರಿನ ಅಂಚೆ ಕಚೇರಿಯಿಂದ ಹಣ ಪಡೆದು ಮನೆಗೆ ಮರಳುತ್ತಿದ್ದರು. ಕಾರು ಉಡುಪಿ ಕಡೆಗೆ ಅತೀ ವೇಗದಲ್ಲಿ ಚಲಿಸುತ್ತಿತ್ತು.
ಡಿಕ್ಕಿಯ ರಭಸಕ್ಕೆ ಲೀಲಾವತಿ ಮೇಲಕ್ಕೆ ಎಸೆಯಲ್ಪಟ್ಟು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಸಾವನ್ನಪ್ಪಿದ್ದಾರೆ.
ಕಾರು ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಾಪು ಸಿಐ ಜಯಶ್ರೀ ಎಂ ಮಾನೆ, ಎಸ್‌ಐ ಅಬ್ದುಲ್ ಖಾದರ್ ಸ್ಥಳಕ್ಕೆ ಭೇಟಿ ನೀಡಿ ಕಾರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಲೀಲಾವತಿ ಅವರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ