ಬೆಳ್ತಂಗಡಿ: ಡಿವೈಡರ್ ಗೆ ಬೈಕ್ ಢಿಕ್ಕಿ: ವಿದ್ಯಾರ್ಥಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತ್ಯು
ಬೆಳ್ತಂಗಡಿ : ವಿದ್ಯಾರ್ಥಿಯ ನಿಯಂತ್ರಣ ತಪ್ಪಿ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಘಟನೆ ಉಜಿರೆಯ ಕಾಲೇಜು ರಸ್ತೆಯ ಬಳಿ ನಡೆದಿದ್ದು ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಕಾಲೇಜಿನಲ್ಲಿ ಕಾರ್ಯಕ್ರಮ ಇದ್ದ ಕಾರಣ ಮಧ್ಯಾಹ್ನ ಊಟ ಮಾಡಿ ವಾಪಸ್ ಬರುವಾಗ ಬೈಕ್ ಸ್ಟ್ಯಾಂಡ್ ತೆಗೆಯದೆ ಚಲಾಯಿಸಿಕೊಂಡು ಬಂದ ಪರಿಣಾಮ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡಿದ್ದ ಉಜಿರೆಯ ಎಸ್.ಡಿ.ಎಮ್ ಖಾಸಗಿ ಕಾಲೇಜಿನ ಮೆಕ್ಯಾನಿಕಲ್ ಡಿಪ್ಲೋಮಾ ವಿದ್ಯಾರ್ಥಿ ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿ ದಿಕ್ಷೀತ್(20) ಚಿಕಿತ್ಸೆ ಫಲಿಸದೆ ಮಂಗಳೂರು ಕೆ.ಎಮ್.ಸಿ ಅತ್ತಾವರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.