March 18, 2026

ಮಂಗಳೂರು: ಸಾರ್ವಜನಿಕರಿಗೆ ಡ್ರಗ್ಸ್ ಮಾರಾಟ: 4,95,000 ರೂ‌. ಮೌಲ್ಯದ ಸೊತ್ತು ಸಹಿತ ಇಬ್ಬರ ಬಂಧನ

0
image_editor_output_image-1682017226-1700817968327.jpg

ಮಂಗಳೂರು: ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಅಬ್ದುಲ್ ರಹಿಮಾನ್(42), ಮೊಹಮ್ಮದ್ ಜಿಯಾದ್(22) ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು ಒಟ್ಟು 4,95,000/- ರೂ ಮೌಲ್ಯದ ಸೊತ್ತು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳು ದಿನಾಂಕ 24-11-2023 ರಂದು ಮಂಗಳೂರು ನಗರದ ಉಳ್ಳಾಲ ತಾಲೂಕಿನ ಮುಡಿಪು ಮೂಳೂರು ಎಂಬಲ್ಲಿ ಇಬ್ಬರು ವ್ಯಕ್ತಿಗಳು ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. ಆರೋಪಿತರು ಬೆಂಗಳೂರಿನಲ್ಲಿ ವಿದೇಶಿ ಪ್ರಜೆಯಿಂದ MDMA ಎಂಬ ಮಾದಕ ವಸ್ತುವನ್ನು ಖರೀದಿ ಮಾಡಿ ತಂದು ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಆರೋಪಿತರಿಂದ 1 ಲಕ್ಷ 75 ಸಾವಿರ ರೂ ಮೌಲ್ಯದ 35 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಆಲ್ಟೋ ಕಾರು ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿರುತ್ತಾರೆ.

ಆರೋಪಿತರಲ್ಲಿ ಅಬ್ದುಲ್ ರಹಿಮಾನ್ ಎಂಬಾತನ ಮೇಲೆ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಿಗ್ರಹ ಕಳುವು ಪ್ರಕರಣ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಗಲಾಟೆ ಪ್ರಕರಣ, ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ಹಾಗೂ ಉಪ್ಪಿನಂಗಡಿ ಠಾಣೆಯಲ್ಲಿ MDMA ಮಾರಾಟ ಪ್ರಕರಣಗಳು ದಾಖಲಾಗಿರುತ್ತವೆ. ಮೊಹಮ್ಮದ್ ಜಿಯಾದ್ ಎಂಬಾತನ ಮೇಲೆ ಈ ಹಿಂದೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ MDMA ಸೇವನೆ ಮಾಡಿದ ಪ್ರಕರಣ ದಾಖಲಾಗಿರುತ್ತದೆ.

Leave a Reply

Your email address will not be published. Required fields are marked *

You may have missed

error: Content is protected !!