ರೈಲ್ವೆ ಮೇಲ್ಸೇತುವೆ ಕಾಮಗಾರಿ ವೇಳೆ ಮಣ್ಣು ಕುಸಿತ: ಓರ್ವ ಕಾರ್ಮಿಕ ಮೃತ್ಯು
ಶಿವಮೊಗ್ಗ: ಶಿವಮೊಗ್ಗದ ಸವಳಂಗ ರಸ್ತೆಯಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯ ವೇಳೆ ಮಣ್ಣು ಕುಸಿದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ಕಾರ್ಮಿಕನನ್ನು ಶಿವಮೊಗ್ಗ ತಾಲೂಕಿನ ಮಂಡೇನಕೊಪ್ಪ ನಿವಾಸಿ ಸತೀಶ್ ನಾಯ್ಕ (30) ಎಂದು ಗುರುತಿಸಲಾಗಿದೆ.
ಶಿವಮೊಗ್ಗದ ಸವಳಂಗ ರಸ್ತೆಯಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯ ವೇಳೆ ಅಂಡರ್‌ಗ್ರೌಂಡ್ ಪೈಪ್‌ಲೈನ್ ಹಾಕಲು 11 ಅಡಿ ಆಳದಷ್ಟು ಜೆಸಿಬಿಯಿಂದ ಗುಂಡಿ ತೆಗೆಯಲಾಗುತ್ತಿತ್ತು. ಈ ವೇಳೆ ಕಾರ್ಮಿಕ ಸತೀಶ್ ನಾಯ್ಕ ಗುಂಡಿಯೊಳಗೆ ನಿಂತುಕೊಂಡು ಕೆಲಸ ಮಾಡುತ್ತಿದ್ದರು. ಈ ವೇಳೆ ಮಣ್ಣು ಕುಸಿದುಬಿದ್ದ ಮಣ್ಣಿನ ಅವಶೇಷಗಳಡಿ ಸಿಲುಕಿ ಸಾವನ್ನಪ್ಪಿದ್ದಾರೆ.
ಈ ಕುರಿತು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.