December 23, 2024

ದಲಿತ ಯುವಕನ ಬಾಯಿಗೆ ಚಪ್ಪಲಿ ತುರುಕಿಸಿ ಹಲ್ಲೆ: ಮಹಿಳಾ ಉದ್ಯಮಿ ಸೇರಿ 6 ಮಂದಿಯ ವಿರುದ್ಧ FIR

0

ಗಾಂಧಿನಗರ: ದಲಿತ ಯುವಕನ ಮೇಲೆ ಹಲ್ಲೆ ಹಾಗೂ ಆತನ ಬಾಯಿಗೆ ಚಪ್ಪಲಿ ತುರುಕಿದ ಆರೋಪದ ಮೇಲೆ ಮಹಿಳಾ ಉದ್ಯಮಿ ಜೊತೆ 6 ಮಂದಿಯ ವಿರುದ್ಧ ಗುಜರಾತ್‍ನ ಮೊರ್ಬಿ ನಗರದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೃತ್ಯ ಎಸಗಿದ ಮಹಿಳಾ ಉದ್ಯಮಿಯನ್ನು ವಿಭೂತಿ ಪಟೇಲ್ ಅಕಾ ರಾಣಿಬಾ ಎಂದು ಗುರುತಿಸಲಾಗಿದೆ. ಈ ಸಂಬಂಧ ಸಂತ್ರಸ್ತ ನಿಲೇಶ್ ದಲ್ಸಾನಿಯಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಈ ದೂರಿನ ಆಧಾರದ ಮೇಲೆ ಮೊರ್ಬಿ ನಗರದ ಪೊಲೀಸರು ಇಂದು ಮಹಿಳೆ ವಿಭೂತಿ ಪಟೇಲ್ ಅಕಾ ರಾಣಿಬಾ ಮತ್ತು ಆಕೆಯ ಸಹೋದರ ಓಂ ಪಟೇಲ್ ಮತ್ತು ಮ್ಯಾನೇಜರ್ ಸೇರಿದಂತೆ ಇತರರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಎಸ್‍ಸಿ/ಎಸ್‍ಟಿ ಸೆಲ್) ಪ್ರತಿಪಾಲ್‍ಸಿನ್ಹ್ ಝಾಲಾ ಹೇಳಿದರು.

 

 

Leave a Reply

Your email address will not be published. Required fields are marked *

error: Content is protected !!