March 26, 2026

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ, ಪ್ರತಿಭಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ

0
image_editor_output_image538218135-1700893651590

ಅಡ್ಯನಡ್ಕ: ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ಸ್ಥಾಪಕರ ದಿನಾಚರಣೆ, ಪ್ರತಿಭಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಸಮಾರಂಭವು ನವೆಂಬರ್ ೨೪ರಂದು ಜನತಾ ಪದವಿಪೂರ್ವ ಕಾಲೇಜಿನ ವಾರಣಾಶಿ ಕೃ? ಸಭಾಭವನದಲ್ಲಿ ಜರುಗಿತು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿಗಳು ಹಾಗೂ ಆರ್ಥಿಕ ತಜ್ಞರಾದ ಅಬ್ದುಲ್ಲಾ ಮಾದುಮೂಲೆ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಗುರಿ, ಛಲ, ದೃಢ ಮನಸ್ಸು ಇರಬೇಕು. ಪುಸ್ತಕಗಳ ಓದು ಮತ್ತು ಜ್ಞಾನವೃದ್ಧಿಯನ್ನು ಮಾಡಿಕೊಳ್ಳಬೇಕು ಎಂದು ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಇಬ್ರಾಹಿಂ ಅಡ್ಕಸ್ಥಳ ಅವರು ಇನ್ನೋರ್ವ ಅಭ್ಯಾಗತರಾಗಿ ಪಾಲ್ಗೊಂಡು ತಾವು ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ದಿನಗಳನ್ನು ನೆನಪಿಸಿಕೊಂಡು ಸಂಸ್ಥಾಪಕರನ್ನು ಸ್ಮರಿಸಿದರು.
ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಗೋವಿಂದ ಪ್ರಕಾಶ್ ಸಾಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಕಾಶದ? ಎತ್ತರದ ಗುರಿಯಿದ್ದರೆ ಏನನ್ನಾದರೂ ಸಾಧಿಸಲು ಸಾಧ್ಯ ಎಂದು ಕಿವಿಮಾತು ನುಡಿದರು. ಜನತಾ ವಿದ್ಯಾಸಂಸ್ಥೆಗಳ ಸಂಚಾಲಕರಾದ ಡಾ. ಅಶ್ವಿನಿ ಕೃ?ಮೂರ್ತಿ ಅವರು ಪ್ರಸ್ತಾವನೆಗೈದರು. ವೇದಿಕೆಯಲ್ಲಿ ಅತಿಥಿಗಳಾದ ಅಬ್ದುಲ್ಲಾ ಮಾದುಮೂಲೆ ಹಾಗೂ ಇಬ್ರಾಹಿಂ ಅಡ್ಕಸ್ಥಳ ಅವರನ್ನು ಸನ್ಮಾನಿಸಲಾಯಿತು. ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ. ಶ್ರೀನಿವಾಸ್ ಹಾಗೂ ಹಿರಿಯ ಶಿಕ್ಷಕ ಎಸ್. ರಾಜಗೋಪಾಲ ಜೋಶಿ ಅತಿಥಿಗಳನ್ನು ಪರಿಚಯಿಸಿದರು. ಶಿವಕುಮಾರ್ ಸಾಯ ಹಾಗೂ ಗಣೇಶ ಕೆ. ಆರ್. ಸನ್ಮಾನಪತ್ರ ವಾಚಿಸಿದರು.
ದತ್ತಿನಿಧಿಯ ವರದಿಯನ್ನು ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಟಿ. ಆರ್. ನಾಯ್ಕ್ ವಾಚಿಸಿದರು. ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಆಡಳಿತಾಧಿಕಾರಿ ರಮೇಶ್ ಎಂ. ಬಾಯಾರು, ಜನತಾ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಹರಿಣಾಕ್ಷಿ ಎ., ಜನತಾ ಪದವಿಪೂರ್ವ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ದೇವಾನಂದ ಶೆಣೈ ಹಾಗೂ ಜನತಾ ಹಿರಿಯ ಪ್ರಾಥಮಿಕ ಶಾಲೆಯ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಚೆನ್ನಕೇಶವ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯಾನಂದ ಉಳಯ ಅವರು ಹಳೆ ವಿದ್ಯಾರ್ಥಿ ಸಂಘದ ವರದಿಯನ್ನು ವಾಚಿಸಿದರು. ಜನತಾ ವಿದ್ಯಾಸಂಸ್ಥೆಗಳ ಸ್ಥಾಪಕರಾದ ದಿ| ವಾರಣಾಶಿ ಸುಬ್ರಾಯ ಭಟ್ ಹಾಗೂ ದಿ| ಸಾಯ ಕೃ? ಭಟ್ ಅವರ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ, ದತ್ತಿನಿಧಿ ಬಹುಮಾನಗಳು, ಸಾಂಸ್ಕೃತಿಕ ಸ್ಪರ್ಧೆಗಳು ಮತ್ತು ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು. ಅಧ್ಯಾಪಕ ವೃಂದದ ರಾಜಗೋಪಾಲ ಜೋಶಿ ಎಸ್., ಸುಗುಣ ರೈ, ಗೀತಾಕುಮಾರಿ, ಮಮತಾ, ಕು. ಪವಿತ್ರ, ಭವ್ಯ ಆರ್ ರೈ ಹಾಗೂ ಸದಾನಂದ ರೈ ಅವರು ಬಹುಮಾನ ವಿಜೇತರ ಹಾಗೂ ಪುರಸ್ಕೃತರ ವಿವರ ವಾಚಿಸಿದರು.
ಪೂರ್ವಾಹ್ನ ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಗೋವಿಂದ ಪ್ರಕಾಶ್ ಸಾಯ ಸಂಸ್ಥೆಯ ಧ್ವಜಾರೋಹಣ ನೆರವೇರಿಸಿದರು. ಆಡಳಿತ ಮಂಡಳಿಯ ಸದಸ್ಯರಾದ ಶಂಕರ್ ಸಾರಡ್ಕ, ಡಾ. ವಿಶ್ವೇಶ್ವರ ವಿ. ಕೆ., ಕೆ. ಸದಾಶಿವ ಹೊಳ್ಳ,  ಜಯಾನಂದ ಉಳಯ, ಸಚ್ಚಿದಾನಂದ ಶಾಸ್ತ್ರಿ, ಅಬ್ದುಲ್ ಕರೀಮ್ ಕುದ್ದುಪದವು, ಅಮೈ ಜನಾರ್ದನ ಭಟ್, ಕೇಶವ ಭಟ್ ಚವರ್ಕಾಡು ಉಪಸ್ಥಿತರಿದ್ದರು. ದಿ| ಪಾರ್ವತಿ ಅಮ್ಮನವರ ಮತ್ತು ಮಗ ದಿ| ನಾರಾಯಣ ಜೋಶಿ ಚವರ್ಕಾಡು ಅವರ ಸ್ಮರಣಾರ್ಥ ಸರೋಜಾ ನಾರಾಯಣ ಜೋಶಿ ಅವರಿಂದ ಸಿಹಿತಿಂಡಿ ವಿತರಣೆ ನಡೆಯಿತು. ಜನತಾ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥನೆ ಹಾಡಿದರು. ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ನಾಯಕಿ ಕು. ನಮಿತಾ ಪಿ.ಕೆ. ಹಾಗೂ ಕು. ವಿಶಾಖಾ ಶೆಣೈ  ಕಾರ್ಯಕ್ರಮ ನಿರೂಪಿಸಿದರು. ಜನತಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರಶಾಂತ ಎಂ. ವಂದಿಸಿದರು. ಅಪರಾಹ್ನ ಹಿರಿಯ ವಿದ್ಯಾರ್ಥಿಗಳಿಂದ ಮನರಂಜನಾ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *

error: Content is protected !!