ಬೆಂಗಳೂರಿನಲ್ಲಿ ಕಂಬಳ: ಮೊದಲ ಕೆರೆ ಉದ್ಘಾಟಿಸಿದ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ
ಬೆಂಗಳೂರು: ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳದ ಮೊದಲ ಕೆರೆ ಉದ್ಘಾಟನೆ ನಡೆದಿದೆ. ವಿಶೇಷ ದೀಪ ಬೆಳಗಿಸುವ ಮೂಲಕ ಕೆರೆಯನ್ನು ಉದ್ಘಾಟಿಸಿದ್ದಾರೆ ಪುನೀತ್ ಪತ್ನಿ ಅಶ್ವಿನಿ.
ದೀಪಾ ಬೆಳಗಿಸಿ, ಗಂಗಾರಾತಿ ಮಾಡಿ ಕರೆಯನ್ನು ಉದ್ಘಾಟನೆ ಮಾಡಲಾಗಿದೆ. ಕಂಬಳ ಸಮಿತಿ ಅಧ್ಯಕ್ಷ ಶಾಸಕ ಅಶೋಕ್ ರೈ ಹಾಗೂ ಬೆಂಗಳೂರು ಕಂಬಳ ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕಂಬಳ ನಡೆಯುತ್ತಿದೆ. ಕಂಬಳಕ್ಕಾಗಿ ಅರಮನೆ ಮೈದಾನ ಸಂಪೂರ್ಣವಾಗಿ ಸಿದ್ಧಗೊಂಡಿದೆ. ಇಂದು ಮತ್ತು ನಾಳೆ ನಡೆಯಲಿರುವ ಕಂಬಳಕ್ಕೆ ಅನುಷ್ಕಾ ಶೆಟ್ಟಿ ರಿಷಬ್ ಶೆಟ್ಟಿ, ಪೂಜಾ ಹೆಗ್ಡೆ, ವಿವೇಕ್ ಒಬೆರಾಯ್, ಸೇರಿದಂತೆ ಹಲವು ತಾರೆಯರು ಮೆರಗು ನೀಡಲಿದ್ದಾರೆ.
ಕರಾವಳಿ ಕಂಬಳ ಉತ್ಸವಕ್ಕೆ ಅನುಷ್ಕಾ ಶೆಟ್ಟಿ, ಪೂಜಾ ಹೆಗ್ಡೆ, ನಟ ದರ್ಶನ್ ಕಾಂತಾರ ಹೀರೋ ರಿಷಬ್, ರಕ್ಷಿತ್ ಶೆಟ್ಟಿ, ಉಪೇಂದ್ರ, ಶಿವಣ್ಣ, ಆಶಿಶ್ ಬಲ್ಲಾಳ್, ರಾಜ್ ಬಿ ಶೆಟ್ಟಿ, ಮೇಘಾ ಶೆಟ್ಟಿ ಸೇರಿದಂತೆ ಹಲವರು ಭಾಗಿಯಾಗುತ್ತಿದ್ದಾರೆ.